ಬ್ರಹ್ಮಾವರ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ

Update: 2020-09-06 14:30 GMT

ಬ್ರಹ್ಮಾವರ, ಸೆ.6: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಚಾರಣ ಸಂಕಿರಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಉಳ್ಳಾಲ ಗೇರು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ರವಿರಾಜ್ ಶೆಟ್ಟಿ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹಸಂಶೋಧನಾ ನಿರ್ದೇಶಕ ಡಾ.ಲಕ್ಮಣ, ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಶಂಕರ್‌ಎಂ., ಬ್ರಹ್ಮಾವರ ಕೆ.ವಿ.ಕೆ. ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಧನಂಜಯ ಬಿ., ಕೃಷಿ ಡಿಪ್ಲೋಮಾ ಮಹಾ ವಿದ್ಯಾಲಯದ ಪ್ರಾಂಶುಪಾಲ ಾ.ಸುಧೀರ್ ಕಾಮತ್ ಮಾತಾನಾಡಿದರು.

 ಸಂಘದ ಸದಸ್ಯ ಡಾ.ಎನ್.ಈ.ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಸುನಿಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News