ಉಡುಪಿ: 113 ಮಂದಿಗೆ ಕೊರೋನ ಪಾಸಿಟಿವ್, ಇಬ್ಬರು ಮೃತ್ಯು

Update: 2020-09-07 14:09 GMT

ಉಡುಪಿ, ಸೆ.7: ನೋವೆಲ್ ಕೊರೋನ ಸೋಂಕು ಇಂದು 113 ಮಂದಿಯಲ್ಲಿ ದೃಢಪಟ್ಟಿದ್ದು, ದಿನದಲ್ಲಿ 21ರ ಹರೆಯದ ಯುವಕ ಸೇರಿದಂತೆ ಇಬ್ಬರು ಕೋವಿಡ್ ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತ ರಾದವರ ಒಟ್ಟು ಸಂಖ್ಯೆ 12840ಕ್ಕೆ ಏರಿದೆ. ಅಲ್ಲದೇ ದಿನದಲ್ಲಿ 282 ಮಂದಿಯ ಗಂಟಲುದ್ರವದ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಸೋಮವಾರ ಕೋವಿಡ್ ಪಾಸಿಟಿವ್ ಪತ್ತೆಯಾದ 113 ಮಂದಿಯಲ್ಲಿ ಉಡುಪಿ ತಾಲೂಕಿನ 64 ಮಂದಿ, ಕುಂದಾಪುರ ತಾಲೂಕಿನ 36 ಹಾಗೂ ಕಾರ್ಕಳ ತಾಲೂಕಿನ 5 ಮಂದಿ ಇದ್ದು, ಉಳಿದಂತೆ ಹೊರಜಿಲ್ಲೆಯಿಂದ ಉಡುಪಿಗೆ ಚಿಕಿತ್ಸೆಗೆಂದು ಬಂದ ಎಂಟು ಮಂದಿಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ ಎಂದವರು ತಿಳಿಸಿದರು.

ದಿನದಲ್ಲಿ ಮಕ್ಕಳು ಸೇರಿದಂತೆ 74 ಮಂದಿ ಪುರುಷರು ಹಾಗೂ 39 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 35 ಪುರುಷರು ಹಾಗೂ 21 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಡಾ. ಸೂಡ ಹೇಳಿದರು.

ಪಾಸಿಟಿವ್ ದೃಢಗೊಂಡ 113 ಮಂದಿಯಲ್ಲಿ ಐವರು ಪಾಸಿಟಿವ್ ಬಂದವರ ಸಂಪರ್ಕದಿಂದ, 24 ಮಂದಿ ಶೀತಜ್ವರದಿಂದ ಹಾಗೂ ಇಬ್ಬರು ಉಸಿರಾಟದ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ದೇಶಿಯ ಪ್ರವಾಸದಿಂದ ಮರಳಿದ ನಾಲ್ಕು ಮಂದಿಯಲ್ಲಿ ಸಹ ಸೋಂಕು ಪತ್ತೆಯಾಗಿದೆ. ಇನ್ನು 78 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.

183 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಇಂದು 183 ಮಂದಿ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 74 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 109 ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದು ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿ ನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 10946ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1780 ಮಂದಿ ಇನ್ನೂ ಚಿಕಿತ್ಸೆಯಲ್ಲಿ ದ್ದಾರೆ. ಇವರಲ್ಲಿ 882 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 898 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

236 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಸೋಮವಾರ ಒಟ್ಟು 236 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯ ಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 189 ಮಂದಿ, ಕೋವಿಡ್ ಸಂಪರ್ಕಿತರು 8 ಮಂದಿ ಇದ್ದರೆ, ಉಸಿರಾಟ ತೊಂದರೆಯ ಇಬ್ಬರು, ಶೀತಜ್ವರದಿಂದ ಬಳಲುವ 18 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 19 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪರೀಕ್ಷೆಗಾಗಿ ಪಡೆದ ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 78065ಕ್ಕೇರಿದೆ. ಇವುಗಳಲ್ಲಿ ಈವರೆಗೆ 65,034 ನೆಗೆಟಿವ್, 12840 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 114 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 191 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಯುವಕ ಬಲಿ: 21ರ ಹರೆಯದ ಯುವಕ ಸೇರಿದಂತೆ ಇಬ್ಬರು ಇಂದು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೊಬ್ಬರು 55 ವರ್ಷ ಪ್ರಾಯದ ಮಧ್ಯ ವಯಸ್ಕರು. ಇಬ್ಬರೂ ಉಡುಪಿ ತಾಲೂಕಿನವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಸತ್ತವರ ಸಂಖ್ಯೆ 114ಕ್ಕೇರಿದೆ.
55ರ ಹರೆಯದ ಪುರುಷ, ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಮಸ್ಯೆಗಳನ್ನು ಹೊಂದಿದ್ದು, ಕೊರೋನಕ್ಕೆ ಪಾಸಿಟಿವ್ ಬಂದಿದ್ದರು. ಯುವಕ ಮೇದೋಜಿರಕ ಗ್ರಂಥಿ ಸಮಸ್ಯೆ, ಸಣ್ಣ ಕರುಳಿನಲ್ಲಿ ರಕ್ತಸ್ರಾವದ ಸಮಸ್ಯೆಯಲ್ಲಿ ಬಳಲುತಿದ್ದು ಅವರಲ್ಲೂ ಚಿಕಿತ್ಸೆ ವೇಳೆ ಕೋವಿಡ್ ಪಾಸಿಟಿವ್ ಕಂಡುಬಂದಿತ್ತು ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News