ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

Update: 2020-09-07 15:37 GMT

ಉಡುಪಿ, ಸೆ.7: ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2021ರಂತೆ ವೇಳಾಪಟ್ಟಿಯ ಚಟುವಟಿಕೆ ಗಳನ್ನು ನಿಗದಿಪಡಿಸಿದೆ.

ನವೆಂಬರ್ 16ರಂದು ಕರಡು ಮತದಾರರ ಪಟ್ಟಿ ಪ್ರಕಟ, ನ.16ರಿಂದ ಡಿಸೆಂಬರ್ 15ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕರಣೆ, ವಿಶೇಷ ನೋಂದಣಿ ಅಭಿಯಾನದಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ಅವ ಧಿಯಲ್ಲಿ ಎರಡು ಶನಿವಾರ ಮತ್ತು ದಿನಾಂಕವನ್ನು ಪ್ರಕಟಿಸಲಾಗುವುದು.

ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ಜನವರಿ 5, ಡೇಟಾಬೇಸ್ ಮತ್ತು ಪೂರಕ ಮುದ್ರಣ ನವೀಕರಣ ಜನವರಿ 14, ಹಾಗೂ ಅಂತಿಮ ಮತದಾರರ ಪಟ್ಟಿಯನ್ನು 2021ರ ಜನವರಿ 15ರಂದು ಪ್ರಕಟಿಸಲಾಗುವುದು.

ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ಮತ್ತು ಅರ್ಜಿಯನ್ನು ಸಲ್ಲಿಸಲು ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಎಸೆಸೆಲ್ಸಿ, ಪಿಯುಸಿ ಅಂಕಪಟ್ಟಿಗಳು, ಪಾನ್ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸ ಬಹುದು.

ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಾಸ್ ಪೋರ್ಟ್, ವಾಹನ ಚಾಲನಾ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ವಾಸ್ತವ್ಯದ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು.

ನಮೂನೆ 6ರಂತೆ 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ವಿಧಾನಸಭಾ ಕ್ಷೇತ್ರದಿಂದ ಬೇರೆಡೆ ವಾಸಸ್ಥಳ ಬದಲಾಯಿಸಿದವರು, ವಿದೇಶದಲ್ಲಿ ವಾಸವಿರುವವರು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಬಹುದು.

ನಮೂನೆ 6ಎರಂತೆ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಬಹುದು. ನಮೂನೆ 7ರಂತೆ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು ಅರ್ಜಿ ಸಲ್ಲಿಸಬಹುದು. ನಮೂನೆ 8 ರಂತೆ ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದು. ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿಯನ್ನು ನಮೂನೆ 8ಎರಲ್ಲಿ ನೀಡಬಹುದು.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ತಾಲೂಕು ಕಚೇರಿಗಳಿಗೆ, ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ತಿದ್ದುಪಡಿಗಾಗಿ ಅರ್ಜಿಗಳನ್ನು -www.ceokarnataka.kar.nic.in ಮತ್ತು -www.nvsp.in- ಸಲ್ಲಿಸಬಹುದಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಮತದಾರರ ಸಹಾಯವಾಣಿ ಕೇಂದ್ರ ಸಂಖ್ಯೆ 1950ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News