ಸೆ.12: ಸಲೀಂ ಅಹ್ಮದ್ ದ.ಕ.ಜಿಲ್ಲೆಗೆ ಭೇಟಿ

Update: 2020-09-10 12:39 GMT

ಮಂಗಳೂರು, ಸೆ.10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೆ.12ರಂದು ದ.ಕ. ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಸುಳ್ಯ-ಅರಂತೋಡು ತೆಕ್ಕಿಲ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬೆಳಗ್ಗೆ 10 ಗಂಟೆಗೆ ಸುಳ್ಯ ಮತ್ತು ಪೂರ್ವಾಹ್ನ 11:30ಕ್ಕೆ ಪುತ್ತೂರು ಕ್ಷೇತ್ರಗಳಲ್ಲಿ ಆರೋಗ್ಯ ಹಸ್ತ ವಾರಿಯರ್ಸ್ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡುವರು. ಮಧ್ಯಾಹ್ನ 1ಕ್ಕೆ ಬಂಟ್ವಾಳ ಕ್ಷೇತ್ರದಲ್ಲಿ ನಡೆಯುವ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯುವ ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸುವರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News