ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ನೇಮಕ

Update: 2020-09-10 14:47 GMT

ಬೆಂಗಳೂರು, ಸೆ. 10: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಡಳಿತಾಧಿಕಾರಿಯನ್ನಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಸಂಬಂಧ ಗುರುವಾರ ಆದೇಶ ಹೊರಡಿಸಲಾಗಿದ್ದು, ಗೌರವ್ ಗುಪ್ತ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯಭಾರದ ಜೊತೆಗೆ ಬಿಬಿಎಂಪಿ ಆಡಳಿತಾಧಿಕಾರಿ ಹೊಣೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News