ಸಾಹಿತ್ಯ ಅಕಾಡೆಮಿಯ ಕಮ್ಮಟಗಳಿಗೆ ಅರ್ಜಿ ಆಹ್ವಾನ

Update: 2020-10-04 16:20 GMT

ಬೆಂಗಳೂರು, ಅ. 4: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕೊರೋನ ಲಾಕ್‍ಡೌನ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ರಾಜ್ಯ ಮಟ್ಟದ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟ ಸೇರಿ ಒಟ್ಟು ನಾಲ್ಕು ಕಮ್ಮಟಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಮ್ಮಟಗಳಿಗೆ ಆಸಕ್ತಿಯಿರುವ 20ರಿಂದ 45 ವರ್ಷ ವಯಸ್ಸಿನ ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನವಾಗಿದೆ. ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org/ ನಲ್ಲಿ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News