ಸಚಿವ ಪಿಯೂಷ್ ಗೋಯಲ್ ಅವರಿಗೆ ಹೆಚ್ಚುವರಿ ಖಾತೆಯ ಜವಾಬ್ದಾರಿ

Update: 2020-10-09 17:25 GMT

ಹೊಸದಿಲ್ಲಿ, ಅ. 9: ಎಲ್‌ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಿಯೂಷ್ ಗೋಯಲ್ ಅವರಿಗೆ ಈಗಿರುವ ಜವಾಬ್ದಾರಿ ಜೊತೆಗೆ ಹೆಚ್ಚುವರಿಯಾಗಿ ಈ ಖಾತೆಯ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಪಿಯೂಷ್ ಗೋಯಲ್ ಅವರು ನರೇಂದ್ರ ಮೋದಿ ನೇತೃತ್ವದ ಸರಕಾರದ ವಾಣಿಜ್ಯ ಹಾಗೂ ಕೈಗಾರಿಕೆ ಖಾತೆಯ ಸಚಿವ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News