ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಓರ್ವ ಸೆರೆ, 30 ಲಕ್ಷ ರೂ., ಮೊಬೈಲ್ ವಶ

Update: 2020-10-21 13:44 GMT

ಬೆಂಗಳೂರು, ಅ.21: ಐಪಿಎಲ್ ಸರಣಿ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಸೋಲು-ಗೆಲುವಿನ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ 30 ಲಕ್ಷ ರೂ. ಹಾಗೂ ಎರಡು ಮೊಬೈಲ್ ವಶಪಡಿಸಿಕೊಂಡಿರುವ ಘಟನೆ ತಲಘಟ್ಟಪುರ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಬನಶಂಕರಿ, ಉಮರ್‍ಭಾಗ್ ಲೇಔಟ್ ನಿವಾಸಿ ಸಂತೋಷ (33) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯು ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕನಕಪುರ ಮುಖ್ಯ ರಸ್ತೆ, ನೈಸ್ ರೋಡ್ ಜಂಕ್ಷನ್ ಸಮೀಪದ ಶೆಲ್ ಪೆಟ್ರೋಲ್ ಬಂಕ್ ಎದುರು ರಸ್ತೆಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಬುಕ್ಕಿಂಗ್ ಮಾಡಿಕೊಳ್ಳಲು ಹಾಗೂ ಮೊಬೈಲ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನಗದು, ಮೊಬೈಲ್ ವಶಪಡಿಸಿಕೊಂಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News