ಮಂಗಳೂರು-ಪೂನಾ ಮಾರ್ಗದ ಸಾರಿಗೆ ಆರಂಭ
Update: 2020-10-27 15:29 GMT
ಉಡುಪಿ, ಅ.27: ಮಂಗಳೂರು ವಿಭಾಗದ ಮಂಗಳೂರು ಬಸ್ ನಿಲ್ದಾಣದಿಂದ ಪೂನಾಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ನಾನ್ ಎಸಿ ಸ್ಲೀಪರ್ ಸಾರಿಗೆ ಸೌಲಭ್ಯವನ್ನು ಅ.26ರಿಂದ ಪ್ರಾರಂಭಿಸಲಾಗಿದೆ.
ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ನಿಗಮದ ಎಸ್‌ಒಪಿಯ ನಿರ್ದೇಶನದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು.
ಈ ಸಾರಿಗೆಗೆ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು ಇದಕ್ಕಾಗಿ -www.ksrtc.in- ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.