ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ
Update: 2020-10-29 15:52 GMT
ಬಂಟಳ, ಅ. 29: ನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿರುವ ಬಂಟ್ವಾಳ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಈ ಪ್ರಕರಣದ ಪ್ರಮುಖ ಆರೋಪಿ ಸತೀಶ್ ಕುಲಾಲ್ ಮತ್ತು ಗಿರಿ ಯಾನೆ ಗಿರೀಶ್ ಕಿನ್ನಿಗೊಳಿ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು.
ಈ ಪ್ರಕರಣದಲ್ಲಿ ಒಟ್ಟು ಐದು ಮಂದಿಯ ಬಂಧನ ಆಗಿದ್ದು ಎಲ್ಲಾ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ಪ್ರಕರವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ಇನ್ನು ಕೆಲವು ಮಂದಿಯ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.