ನ.3ರಂದು ಕಾಪು ತಾಲೂಕು ಪಂಚಾಯತ್ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ

Update: 2020-11-01 16:11 GMT

ಉಡುಪಿ, ನ.1: ಹೈಕೋರ್ಟ್ ತಡೆಯಾಜ್ಞೆಯಿಂದ ಫಲಿತಾಂಶ ತಡೆಹಿಡಿ ಯಲ್ಪಟ್ಟ ನೂತನ ಕಾಪು ತಾಲೂಕು ಪಂಚಾಯತ್ ಅಧ್ಯಕ್ಷ -ಉಪಾಧ್ಯಕ್ಷರ ಘೋಷಣೆ ನ.3ರಂದು ನಡೆಯಲಿದೆ. ಚುನಾವಣಾಧಿಕಾರಿ ಕುಂದಾಪುರ ಉಪವಿಬಾಗಾಧಿಕಾರಿ ರಾಜು ಕೆ. ಆ.10 ರಂದು ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು. ಆದರೆ ಹೈಕೋರ್ಟ್, ಮುಂದಿನ ಆದೇಶದವರೆಗೆ ಫಲಿತಾಂಶ ಘೋಷಿಸದಂತೆ ಅದೇ ದಿನ ತಡೆಯಾಜ್ಞೆ ನೀಡಿತ್ತು. ಬಳಿಕ ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅ.20ರಂದು ಫಲಿತಾಂಶ ಘೋಷಣೆಗೆ ಅಂತಿಮ ಆದೇಶ ನೀಡಿತ್ತು.

ಅದರಂತೆ ನ.3ರಂದು ಬೆಳಿಗ್ಗೆ 11 ಗಂಟೆಗೆ ಕಾಪು ಪುರಸಭೆ ಸಬಾಂಗಣದಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸದಸ್ಯರಿಗೆ ಉಪವಿಬಾಗಾಧಿಕಾರಿ ತಿಳುವಳಿಕೆ ಪತ್ರ ರವಾನಿಸಿದ್ದಾರೆ.ಸರಕಾರದ ಅಧಿಸೂಚನೆಯಂತೆ ಉಡುಪಿ ತಾಪಂನಿಂದ ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬಂದಿರುವ 12 ಸದಸ್ಯ ಬಲದ ಕಾಪು ತಾಪಂನಲ್ಲಿ ಕಾಂಗ್ರೆಸ್ 7 ಹಾಗೂ ಬಿಜೆಪಿ 5 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ. ಮೀಸ ಲಾತಿಯಂತೆ ಬಿಜೆಪಿಯ ಏಕ ಮಾತ್ರ ಅ್ಯರ್ಥಿ ಶಶಿಪ್ರಭಾ ಶೆಟ್ಟಿ ಅಧ್ಯಕ್ಷರಾಗು ವುದು ಖಚಿತವಾಗಿತ್ತು.

ಈ ನಡುವೆ ಕಾಂಗ್ರೆಸ್ ಹೈಕೋರ್ಟ್ ಮೆಟ್ಟಿಲೇರಿತ್ತು.ಸದ್ರಿ ಮೀಸಲಿನಂತೆ ತಾಪಂ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಶಶಿಪ್ರಭಾ ಶೆಟ್ಟಿ ಮತ್ತು ಕಾಂಗ್ರೆಸ್‌ನಿಂದ ರೇಣುಕಾ ಪುತ್ರನ್, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಕೇಶವ ಮೊಯ್ಲಿ, ಕಾಂಗ್ರೆಸ್‌ನಿಂದ ಯು.ಸಿ.ಶೇಖಬ್ಬ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ರೇಣುಕಾ ಹೊರತು ಉಳಿದವ ನಾಮಪತ್ರ ಅಂಗೀಕೃತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News