ಕೋವಿಡ್-19 ರೋಗಿಗಳನ್ನುರಕ್ಷಿಸಲು ಈ ರಾಜ್ಯದಲ್ಲಿ ಪಟಾಕಿಗಳ ಮಾರಾಟಕ್ಕೆ ನಿಷೇಧ

Update: 2020-11-02 06:04 GMT

ಜೈಪುರ: ಕೋವಿಡ್-19 ರೋಗಿಗಳು ಹಾಗೂ ಸಾರ್ವಜನಿಕರಿಗೆ ಆಗುವ ದುಷ್ಪರಿಣಾಮಗಳಿಂದ ರಕ್ಷಿಸಲು ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಿದ್ದೇನೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ತಿಳಿಸಿದ್ದಾರೆ.

ಪಟಾಕಿಯಿಂದ ಹೊರಸೂಸುವ ವಿಷಕಾರಿ ಹೊಗೆಯಿಂದ ಕೋವಿಡ್-19  ಸೋಂಕಿತ ರೋಗಿಗಳು ಹಾಗೂ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ರಾಜ್ಯದಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಲು ಹಾಗೂ ಫಿಟ್ನೆಸ್ ಪ್ರಮಾಣಪತ್ರವಿಲ್ಲದ ವಾಹನ ಸಂಚಾರವನ್ನು ನಿರ್ಬಂಧಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ದೇಶದ ಉತ್ತರ ರಾಜ್ಯಗಳಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಈ ಕ್ರಮಕ್ಕೆ ಮುಂದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News