ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟದ ಬಳಿಕ ಗೋಡೌನ್ ಕುಸಿತ, 9 ಮಂದಿ ಮೃತ

Update: 2020-11-04 13:01 GMT

ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿನ ಪಿರಾನಾ-ಪಿಪ್ಲಾಜ್ ರಸ್ತೆಯಲ್ಲಿರುವ ರಾಸಾಯನಿಕ ಬಾಯ್ಲರ್ ಕಾರ್ಖಾನೆ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಸಮೀಪದ ಗಾರ್ಮೆಂಟ್ ಗೋಡೌನ್ ನ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಇತರ 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಘಟನೆಯ ಕುರಿತು ಶೋಕ ವ್ಯಕ್ತಪಡಿಸಿದ್ದಾರೆ.

ಬುಧವಾರ ಬೆಳಗ್ಗೆ 11:30ರಿಂದ 11:40ರ ಸುಮಾರಿಗೆ ಘಟನೆ ನಡೆದಿದೆ ಎಂದು ಅಗ್ನಿಶಾಮಕ ದಳದ ಸುರಕ್ಷತಾ ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅವಶೇಷಗಳಡಿಯಿಂದ 14 ಮಂದಿಯನ್ನು ಹೊರ ತೆಗೆಯಲಾಗಿದೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News