ಉಡುಪಿ ಜಿಲ್ಲೆಯಲ್ಲಿ 50 ಮಂದಿಗೆ ಕೋವಿಡ್ ಪಾಸಿಟಿವ್

Update: 2020-11-04 13:29 GMT

ಉಡುಪಿ, ನ.4: ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 50ಕ್ಕೇರಿದೆ. ಮಂಗಳವಾರ ಇದು 20ಕ್ಕಿಳಿದಿತ್ತು. ದಿನದಲ್ಲಿ 61 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಮಕ್ಕಳೂ ಸೇರಿದಂತೆ 27 ಮಂದಿ ಪುರುಷರು ಹಾಗೂ 23 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲೂ 10 ಮಂದಿ ಪುರುಷರು ಹಾಗೂ 15 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 30, ಕುಂದಾಪುರ ತಾಲೂಕಿನ 7 ಹಾಗೂ ಕಾರ್ಕಳ ತಾಲೂಕಿನ 13ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ಹೇಳಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 50 ಮಂದಿಯಲ್ಲಿ ಮೂರು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರೆ, ಉಳಿದ 47 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

61 ಮಂದಿ ಗುಣಮುಖ: ಮಂಗಳವಾರ ಜಿಲ್ಲೆಯಲ್ಲಿ 61 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,402 ಆಗಿದೆ. ಜಿಲ್ಲೆಯಲ್ಲಿ ಸದ್ಯ 451 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದು, ವಿವಿಧ ಆಸ್ಪತ್ರೆ ಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

1146 ನೆಗೆಟಿವ್: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 1198 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇವರಲ್ಲಿ 1146 ಮಂದಿ ನೆಗೆಟಿವ್ ಬಂದಿದ್ದು, 52 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,035 ಆಗಿದೆ.

ಜಿಲ್ಲೆಯಲ್ಲಿ ಮಂಗಳವಾರದವರೆಗೆ ಒಟ್ಟು 1,89,652 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,67,617 ಮಂದಿ ನೆಗೆಟಿವ್ ಹಾಗೂ 22,035 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 21,402 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 184 ಮಂದಿ ಮೃತಪಟ್ಟಿದ್ದಾರೆ.

ಒಬ್ಬರ ಸಾವು: ಕೋವಿಡ್ ಸೋಂಕಿನಿಂದ ಮಂಗಳವಾರ ಜಿಲ್ಲೆಯಲ್ಲಿ ಉಡುಪಿ ತಾಲೂಕಿನ 45 ವರ್ಷ ಪ್ರಾಯದ ಪುರುಷರೊಬ್ಬರು ಮೃತಪಟ್ಟಿ ದ್ದಾರೆ. ರಕ್ತದೊತ್ತಡ, ಕಿಡ್ನಿ ಸಮಸ್ಯೆ ಹಾಗೂ ನ್ಯೂಮೋನಿಯಾವಿದ್ದ ಇವರಲ್ಲಿ ಕೋವಿಡ್ ಸೋಂಕೂ ಕಂಡುಬಂದಿದ್ದು, ಆ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿ ದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 184 ಆಗಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News