ದ.ಕ.: ಕೋವಿಡ್‌ಗೆ ಮೂರು ಬಲಿ; ಹೊಸದಾಗಿ 88 ಮಂದಿಗೆ ಸೋಂಕು
Update: 2020-11-05 14:24 GMT
ಮಂಗಳೂರು, ನ. 5: ದ.ಕ. ಜಿಲ್ಲೆಯಲ್ಲಿ ಗುರುವಾರ 88 ಕೊರೋನ ಪ್ರಕರಣಗಳು ದೃಢಪಟ್ಟಿದ್ದು, ಮೂರು ಮಂದಿ ಸಾವಿಗೀಡಾಗಿದ್ದಾರೆ. 151 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 30,668ಕ್ಕೇರಿದೆ. ಅವರಲ್ಲಿ ಬಹುತೇಕ 28,711 ಮಂದಿ ಗುಣಮುಖರಾಗಿದ್ದರೆ, 684 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ ಕೇವಲ 1,273 ಮಂದಿ ಮಾತ್ರ ಮನೆಗಳಲ್ಲಿ ಹಾಗೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 11,220 ಮಾಸ್ಕ್ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, 12,29,502 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.