ಕಾನ್‌ಸ್ಟೇಬಲ್ ನೇಮಕಾತಿ : ನ.10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ

Update: 2020-11-06 16:02 GMT

ಉಡುಪಿ, ನ. 6: ಜಿಲ್ಲಾ ಪೊಲೀಸ್ ಘಟಕದ ಪ್ರಸಕ್ತ ಸಾಲಿನ ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ನವೆಂಬರ್ 10ರಂದು ಬೆಳಗ್ಗೆ 6:30ಕ್ಕೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಮತ್ತು ನಿಗದಿತ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು. ಲಿಖಿತ ಪರೀಕ್ಷೆಯ ಪ್ರವೇಶ ಪತ್ರಕ್ಕಾಗಿ ಇಲಾಖೆಯ ವೆಬ್‌ಸೈಟ್ -www.ksp.gov.in-ನ್ನು ಪರಿಶೀಲಿಸ ಬಹುದು.

ನೇಮಕಾತಿ ಸಂಬಂಧ ಪರೀಕ್ಷೆ ನಡೆಯಲಿರುವುದರಿಂದ ಈ ದಿನದಂದು ಬೆಳಗ್ಗೆ 5 ರಿಂದ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News