ನ.7ರಂದು ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಮಟ್ಟದ ವಕಾಲತ್ತು, ಕಾನೂನು ಅರಿವು ಕಾರ್ಯಕ್ರಮ

Update: 2020-11-06 16:03 GMT

ಉಡುಪಿ, ನ.6: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಸಾರಥ್ಯ ಪಯಣ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಶ್ರಯ ಸಮುದಾಯ ಸಂಘಟನೆ ನೇತೃತ್ವದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ವಕಲತ್ತು ಮತ್ತು ಕಾನೂನು ಅರಿವು ಕಾರ್ಯಕ್ರಮ ನ.7ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್ ವೈ ಉದ್ಘಾಟಿಸಲಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಪೌರಾಯುಕ್ತ ಡಾ. ಆನಂದ ಜಿ. ಕಲ್ಲೋಳಿಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶೇಷಪ್ಪ ಉಪಸ್ಥಿತರಿರುವರು.

ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರ ಮೈತ್ರಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News