ವಂಚನೆ ಪ್ರಕರಣ: ಬಂಧಿತ ಶಾಸಕ ಕಮರುದ್ದೀನ್ ಎರಡು ದಿನ ಪೊಲೀಸ್ ಕಸ್ಟಡಿಗೆ

Update: 2020-11-09 11:26 GMT

ಕಾಸರಗೋಡು : ಫ್ಯಾಶನ್ ಜುವೆಲ್ಲರಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ ನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ  ಹೊಸದುರ್ಗ ನ್ಯಾಯಾಲಯ ತೀರ್ಪು ನೀಡಿದೆ.

ಕಮರುದ್ದೀನ್  ಸಲ್ಲಿಸಿರುವ  ಜಾಮೀನು ಅರ್ಜಿ ಯ  ವಿಚಾರಣೆ ಬುಧವಾರಕ್ಕೆ ಮುಂದೂಡಿದೆ. ಬೆಳಗ್ಗೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡರೂ ಕಸ್ಟಡಿಗೆ ಒಪ್ಪಿಸುವಂತೆ ತನಿಖಾ ತಂಡ ಅರ್ಜಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ಎರಡು ದಿನಗಳ ವಿಚಾರಣೆ ಬಳಿಕ  ಜಾಮೀನು ಅರ್ಜಿಯನ್ನು ಪರಿಗಣಿಸಲು ನ್ಯಾಯಾಲಯ ತೀರ್ಮಾನಿಸಿದೆ.

ಬುಧವಾರ ಸಂಜೆ 3 ಗಂಟೆಗೆ ಕಮರುದ್ದೀನ್ ನನ್ನು  ಮತ್ತೆ ಹಾಜರು ಪಡಿಸಲು ನ್ಯಾಯಾಲಯ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News