ಉಡುಪಿ : 29 ಮಂದಿ ಕೋವಿಡ್‌ಗೆ ಪಾಸಿಟಿವ್

Update: 2020-11-09 13:17 GMT

ಉಡುಪಿ, ನ.9: ಜಿಲ್ಲೆಯ 29 ಮಂದಿ ಮಾತ್ರ ಸೋಮವಾರ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 54 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾದರೆ, ಜಿಲ್ಲೆಯಲ್ಲಿ ಸದ್ಯ 353 ಮಂದಿ ಮಾತ್ರ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 13 ಮಂದಿ ಪುರುಷರು ಹಾಗೂ 16 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ ಐವರು ಪುರುಷರು ಹಾಗೂ 10 ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 17, ಕುಂದಾಪುರ ತಾಲೂಕಿನ ಇಬ್ಬರು ಹಾಗೂ ಕಾರ್ಕಳ ತಾಲೂಕಿನ 8 ಮಂದಿಯಲ್ಲದೇ ಹೊರಜಿಲ್ಲೆಯ ಇಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 29 ಮಂದಿಯಲ್ಲಿ ಎಂಟು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರೆ, ಉಳಿದ 21 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

54 ಮಂದಿ ಗುಣಮುಖ: ರವಿವಾರ ಜಿಲ್ಲೆಯಲ್ಲಿ 54 ಮಂದಿ ಸೋಂಕಿ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,693 ಆಗಿದೆ. ಜಿಲ್ಲೆಯಲ್ಲಿ ಸದ್ಯ 353 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದು, ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು.

1587 ನೆಗೆಟಿವ್: ಜಿಲ್ಲೆಯಲ್ಲಿ ರವಿವಾರ ಒಟ್ಟು 1614 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇವರಲ್ಲಿ 1587 ಮಂದಿ ನೆಗೆಟಿವ್ ಬಂದಿದ್ದು, 27 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,232 ಆಗಿದೆ.

ರವಿವಾರದವರೆಗೆ ಜಿಲ್ಲೆಯಲ್ಲಿ ಒಟ್ಟು 1,99,235 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,77,003 ಮಂದಿ ನೆಗೆಟಿವ್ ಹಾಗೂ 22,232 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 21,693 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 187 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಹೀಗಾಗಿ ಕಳೆದ ಮೂರು ದಿನಗಳಿಂದ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 187ರಲ್ಲೇ ಇದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News