ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

Update: 2020-11-10 13:57 GMT

ಉಡುಪಿ : ಮಣಿಪಾಲ ಪರಿಸರದಲ್ಲಿ ಉಗ್ರ ರೀತಿಯಲ್ಲಿ ವರ್ತಿಸುತ್ತಿದ್ದ ಮಾನಸಿಕ ಅಸ್ವಸ್ಥರೊಬ್ಬರನ್ನು ಉಡುಪಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಮಣಿಪಾಲ ಪೋಲಿಸ್ ಠಾಣೆ, ಉಡುಪಿ ಜಿಲ್ಲಾ ನಾಗರಿಕ ಸಮಿತಿ, ಹಾಗೂ ಸ್ಥಳೀಯರ ಸಹಕಾರ ದೊಂದಿಗೆ ಸೋಮವಾರ ರಕ್ಷಣೆ ಮಾಡಿದೆ.

ಕಳೆದ ಹಲವಾರು ದಿನಗಳಿಂದ ಅಪರಿಚಿತ ಮಾನಸಿಕ ಅಸ್ವಸ್ಥ ವ್ಯಕ್ತಿಯ ಉಪಟಳದಿಂದ ಸಾರ್ವಜನಿಕರು ಭೀತಿಗೊಳಗಾಗಿದ್ದರು. ಅಶ್ಲಿಲ ವರ್ತನೆ, ವಿನಾಕಾರಣ ವಾಹನಗಳ ಮೇಲೆ ಕಲ್ಲುಗಳನ್ನು ಎಸೆಯುವುದು, ಮಹಿಳೆಯರನ್ನು ಹಿಂಬಾಲಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಲ್ಯಾಣಾ ಧಿಕಾರಿ ರತ್ನ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ನಂತರ ಆ ವ್ಯಕ್ತಿಯನ್ನು ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಕೆ.ಬಾಲಗಂಗಾಧರ ರಾವ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News