62 ದೇವಳಕ್ಕೆ ವ್ಯವಸ್ಥಾಪನಾ ಸಮಿತಿ ರಚನೆ

Update: 2020-11-10 16:27 GMT

ಮಂಗಳೂರು, ನ.10: ದ.ಕ. ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ಒಟ್ಟು 62 ದೇವಸ್ಥಾನ/ದೈವಸ್ಥಾನಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ.

ಮಂಗಳೂರು ತಾಲೂಕಿನ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ಐದು ದೇವಸ್ಥಾನ, ಬಂಟ್ವಾಳ ತಾಲೂಕಿನ ಪ್ರವರ್ಗ ‘ಸಿ’ಗೆ ಸೇರಿದ 9 ದೇವಸ್ಥಾನ, ಬೆಳ್ತಂಗಡಿ ತಾಲೂಕು ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ 18 ದೇವಸ್ಥಾನ, ಪುತ್ತೂರು ತಾಲೂಕಿನ 20 ದೇವಸ್ಥಾನ, ಸುಳ್ಯ ತಾಲೂಕಿನ 10 ದೇವಸ್ಥಾನಗಳೂ ಸೇರಿದಂತೆ 62 ದೇವಸ್ಥಾನ/ದೈವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್‌ನ ಸಹಾಯಕ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News