ಆರ್.ಆರ್.ನಗರ, ಶಿರಾ ಗೆಲುವಿಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಮೋದಿ, ಶಾ

Update: 2020-11-11 06:42 GMT
ಫೈಲ್ ಫೋಟೊ

ಹೊಸದಿಲ್ಲಿ, ನ.11: ಆರ್.ಆರ್.ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.

 ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ‘‘ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ. ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು’’ ಎಂದು ಹೇಳಿದ್ದಾರೆ.

ಅದೇರೀತಿ ಅಮಿತ್ ಶಾ ‘‘ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ’’ ಎಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News