ದೆಹಲಿ : ಒಂದೇ ದಿನ 8 ಸಾವಿರಕ್ಕೂ ಅಧಿಕ ಕೊರೋನ ಸೋಂಕು

Update: 2020-11-12 03:31 GMT

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸಾಂಕ್ರಾಮಿಕದ ಮೂರನೇ ಅಲೆ ಸ್ಪಷ್ಟವಾಗಿ ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 8593 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಮೊಟ್ಟಮೊದಲ ಬಾರಿಗೆ ದೆಹಲಿಯಲ್ಲಿ ದೈನಿಕ ಪ್ರಕರಣಗಳ ಸಂಖ್ಯೆ ಎಂಟು ಸಾವಿರದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 85 ಸೋಂಕಿತರು ಅಸು ನೀಗಿದ್ದು, ಇದುವರೆಗೆ ದಾಖಲಾದ ಎರಡನೇ ಗರಿಷ್ಠ ಸಂಖ್ಯೆ ಇದಾಗಿದೆ. ಜೂನ್ 16ರಂದು ದೆಹಲಿಯಲ್ಲಿ 93 ಮಂದಿ ಸಾವಿಗೀಡಾಗಿದ್ದು ಇದುವರೆಗಿನ ದಾಖಲೆ.

ರಾಜಧಾನಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,59,974ಕ್ಕೇರಿದ್ದು, 42,629 ಸಕ್ರಿಯ ಪ್ರಕರಣಗಳಿವೆ. ಹಬ್ಬದ ಋತುವಿನಲ್ಲಿ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆಯೂ ಹೆಚ್ಚಿದ್ದು, ಚಳಿಗಾಲ ಆರಂಭವಾಗುತ್ತಿದ್ದಂತೆ ಮಾಲಿನ್ಯ ಮಟ್ಟ ಹೆಚ್ಚಿರುವುದು ಕೂಡಾ ಆಡಳಿತಕ್ಕೆ ತಲೆ ನೋವಾಗಿದೆ. ಕಳೆದ ಎರಡು ವಾರಗಳಿಂದ ಪ್ರತಿದಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ.

ಸಾಂಕ್ರಾಮಿಕ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ನಿನ್ನೆಯಷ್ಟೇ ದೆಹಲಿ ಹೈಕೋರ್ಟ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಸೂಚನೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News