ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2020-11-13 12:33 GMT

ಉಡುಪಿ, ನ.13: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ -kmdc.kar.nic.in/loan- ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದ್ದು, ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿ.21ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News