‘ಸಹಕಾರಿಗಳು ಜೊತೆಯಾಗಿ ಆರ್ಥಿಕ ಸಂಕಷ್ಟ ಎದುರಿಸಬೇಕಾಗಿದೆ’

Update: 2020-11-14 13:48 GMT

ಉಡುಪಿ, ನ.14: ಕೊರೋನಾದಿಂದಾಗಿ ಸಹಕಾರಿ ಸೇರಿದಂತೆ ಎಲ್ಲ ಕ್ಷೇತ್ರ ಗಳಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ. ಇದನ್ನು ಸಹಕಾರಿಗಳು ಜೊತೆಯಾಗಿ ಎದುರಿಸಬೇಕಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿ ಯನ್, ಉಡುಪಿ ಕೆನರಾ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ, ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ವನ್ನು ಶನಿವಾರ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಲಿದೆ. ಪ್ರವಾಸೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ಸರಕಾರ ಆದ್ಯತೆ ನೀಡು ತ್ತಿದೆ. ಆದುದರಿಂದ ಭಾರತ ನಿರ್ಮಾಣಕ್ಕೆ ಸಹಕಾರಿ ಸೇರಿದಂತೆ ಎಲ್ಲರೂ ಮಾನಸಿಕವಾಗಿ ಸಿದ್ಧರಾಗಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ಡಾ.ಟಿಎಂಎ ಪೈ ಕೋವಿಡ್ -19 ಆಸ್ಪತ್ರೆಯ ನೋಡೆಲ್ ಅಧಿಕಾರಿ ಡಾ.ಶಶಿಕಿರಣ್ ಉಮಾಕಾಂತ್ ಮತ್ತು ಉಡುಪಿ ತಾಲೂಕು ಆರೋಗ್ಯಾಧಿಕಾರಿ ನಾಗರತ್ನ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಎಂ.ಎಚ್.ವಿಠ್ಠಲ ಸೇರಿಗಾರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಮುಖ್ಯ ಅತಿಥಿಗಳಾಗಿದ್ದರು.

ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಪರ್ಕಳ ದುರ್ಗಾ ಪರಮೇಶ್ವರಿ ಸೊಸೈಟಿ ಅಧ್ಯಕ್ಷ ಬಿ.ರಾಮಕೃಷ್ಣ ನಾಯಕ್, ಯೂನಿಯನ್ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಬಲ್ಲಾಳ್, ಪ್ರಕಾಶ್‌ಚಂದ್ರ ಶೆಟ್ಟಿ, ನಿರ್ದೇಶಕರಾದ ಹರೀಶ್ ಕಿಣಿ, ಮನೋಜ್ ಕರ್ಕೇರ, ಪ್ರಭಾರ ಸಿಇಓ ಪುರು ಷೋತ್ತಮ ಎಸ್.ಪಿ. ಉಪಸ್ಥಿತರಿದ್ದರು.

ಕೆನರಾ ಸೊಸೈಟಿಯ ಅಧ್ಯಕ್ಷ ಯು.ಮೋಹನ್ ಉಪಾಧ್ಯ ಸ್ವಾಗತಿಸಿದರು. ಶ್ರೀದುರ್ಗಾಪರಮೇಶ್ವರಿ ಸೊಸೈಟಿಯ ಸಿಇಓ ನಿತ್ಯಾನಂದ ಪರ್ಕಳ ಕಾರ್ಯ ಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News