ರಾಜ್ಯದ ಹಲವೆಡೆ ಇಂದು ಸಾಧಾರಣ ಮಳೆ ಸಾಧ್ಯತೆ

Update: 2020-11-15 10:01 GMT

ಬೆಂಗಳೂರು, ನ.15: ಈಶಾನ್ಯ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಕೆಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದಾಗಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಮೇಲ್ಮೈ ಗಾಳಿ ಬೀಸುತ್ತಿದೆ. ಇದರಿಂದ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿದ್ದು, ನ.18ರಂದು ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News