ಬೆಂಗಳೂರು: ಪಬ್ ನಲ್ಲಿ ಅಗ್ನಿ ಅವಘಡ

Update: 2020-11-16 11:38 GMT

ಬೆಂಗಳೂರು, ನ.16: ನಗರದ ಎಚ್​ಎಸ್​ಆರ್ ಲೇಔಟ್​ನ ಹ್ಯಾಂಗ್ ಓವರ್ ಪಬ್​ನಲ್ಲಿ‌ ಅಗ್ನಿ‌ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ  ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಘಟನೆ ಸಂಬಂಧ ಸ್ಥಳಕ್ಕಾಗಮಿಸಿದ ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿವೆ. ಮೇಲ್ನೋಟಕ್ಕೆ ಘಟನೆಯು ಶಾರ್ಟ್ ಸರ್ಕ್ಯೂಟ್​​ನಿಂದ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News