ಉಡುಪಿ ಜಿಲ್ಲೆಯಲ್ಲಿ 21 ಮಂದಿಗೆ ಕೋವಿಡ್ ಪಾಸಿಟಿವ್

Update: 2020-11-17 15:05 GMT

ಉಡುಪಿ, ನ.17: ಜಿಲ್ಲೆಯಲ್ಲಿ ಮಂಗಳವಾರ 21 ಮಂದಿಯಲ್ಲಿ ಕೋವಿಡ್‌ಗೆ ಪಾಸಿಟಿವ್ ಕಾಣಿಸಿಕೊಂಡಿದೆ. ದಿನದಲ್ಲಿ 36 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾದರೆ, ಸದ್ಯ ಜಿಲ್ಲೆಯಲ್ಲಿ 211 ಮಂದಿ ಮಾತ್ರ ಕೊರೋನಕ್ಕೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 14 ಮಂದಿ ಪುರುಷರು ಹಾಗೂ 7 ಮಂದಿ ಮಹಿಳೆಯರು. ಇವರಲ್ಲಿ ಐವರು ಪುರುಷರು ಹಾಗೂ ಒಬ್ಬ ಮಹಿಳೆ ಯಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 9, ಕುಂದಾಪುರ ತಾಲೂಕಿನ 11 ಹಾಗೂ ಕಾರ್ಕಳ ತಾಲೂಕಿನ ಒಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

36 ಮಂದಿ ಗುಣಮುಖ: ಸೋಮವಾರ 36 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತ ರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,997 ಆಗಿದೆ. ಜಿಲ್ಲೆಯಲ್ಲಿ ಸದ್ಯ 211 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದಾರೆ ಎಂದರು.

1903 ನೆಗೆಟಿವ್: ಜಿಲ್ಲೆಯಲ್ಲಿ ಸೋಮವಾರ ಒಟ್ಟು 1926 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1903 ಮಂದಿ ನೆಗೆಟಿವ್ ಬಂದಿದ್ದಾರೆ. 23 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಹೀಗಾಗಿ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,400 ಆಗಿದೆ.

ಸೋಮವಾರದವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ 2,15,916 ಆಗಿದೆ. ಇವರಲ್ಲಿ 1,93,516 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದಂತೆ ಒಟ್ಟು 22,400 ಮಂದಿ ಪಾಸಿಟಿವ್ ಬಂದಿದ್ದು, ಇವರಲ್ಲಿ ಈಗಾಗಲೇ 21,997 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ನ.7ರಿಂದ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 187ರಲ್ಲೇ ನಿಂತಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News