ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಸಿ.ಸಕ್ಸೇನಾ ನಿಧನ

Update: 2020-11-18 15:34 GMT

ಬೆಂಗಳೂರು, ನ.18: ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಸಿ.ಸಕ್ಸೇನಾ(70) ಬುಧವಾರ ಬೆಳಗ್ಗೆ 6.30ಕ್ಕೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿಜಿಪಿ ಎಸ್.ಸಿ ಸಕ್ಸೇನಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಕ್ಸೇನಾ ಅವರನ್ನು 10 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿತ್ತು.

ಆದರೆ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಹೀಗಾಗಿ ಚಿಕಿತ್ಸೆ ಪಲಿಸದೆ ಎಸ್.ಸಿ ಸಕ್ಸೇನಾ ಬೆಳಗ್ಗೆ 6.30ಕ್ಕೆ ವಿಧಿವಶರಾಗಿದ್ದಾರೆ. 1976ನೆ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಸಕ್ಸೇನಾ ಅಲ್ಲಾಳಸಂದ್ರದ ಜಕ್ಕೂರು ಪ್ಲಾಂಟೇಷನ್ ಲೇಔಟ್‍ನಲ್ಲಿ ವಾಸವಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಹೆಬ್ಬಾಳದ ಅಗ್ನಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News