ಮಣಿಪಾಲದಲ್ಲಿ ಸುಮಾರು 15 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು ವಶ

Update: 2020-11-19 14:22 GMT

ಉಡುಪಿ, ನ.19: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಥೆಟಿಕ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಇಂದು ಮತ್ತೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಪೊಲೀಸರು, ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ, ಒಟ್ಟು 244 ಗ್ರಾಂ ತೂಕದ ಒಟ್ಟು 462 ಎಂಡಿಎಂಎ ಮಾತ್ರೆಗಳು ಮತ್ತು 14 ಗ್ರಾಂ ವಿದೇಶಿ ಹೈಡ್ರೊವಿಡ್ ಗಾಂಜಾಗಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತುಗಳ ಒಟ್ಟು ಮೌಲ್ಯ 14,70,000 ರೂ. ಎಂದು ಅಂದಾಜಿಸಲಾಗಿದೆ. ಕಳೆದ 2 ಎರಡು ತಿಂಗಳಲ್ಲಿ ವಿದೇಶದಿಂದ ಆಮದು ಮಾಡಿಕೊಂಡಿರುವ ನಿಷೇಧಿತ ಮಾದಕ ವಸ್ತುಗಳನ್ನು ಇದೀಗ ಐದನೇ ಬಾರಿಗೆ ವಶಪಡಿಸಿಕೊಳ್ಳಲಾಗಿದ್ದು, ಇದರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಆರೋಪಿ ಗಳನ್ನು ಪತ್ತೆ ಮಾಡಲು ತಂಡಗಳನ್ನು ರಚಿಸಲಾಗಿದೆಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಉಡುಪಿ ಎಸ್ಪಿ ವಿಷ್ಣುವರ್ಧನ್ ಮತ್ತು ಹೆಚ್ಚುವರಿ ಎಸ್ಪಿ ಕುಮಾರ್ ‌ಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕಾರ್ಕಳ ಭರತ್ ಎಸ್.ರೆಡ್ಡಿ ಮತ್ತು ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ.ಗೌಡ ನೇತೃತ್ವದಲ್ಲಿ ಉಡುಪಿ ಅಸಿಸ್ಟೆಂಟ್ ಡ್ರಗ್ ಕಂಟ್ರೋಲರ್ ನಾಗರಾಜ್, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಶಂಕರ್ ಮತ್ತು ಪ್ರದೀಪ್ ಕುಮಾರ್ ಮತ್ತು ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಆದರ್ಶ, ದಯಾಕರ್ ಪ್ರಸಾದ್, ಶುಭ, ಆನಂದಯ್ಯ, ಸುದೀಪ್, ಕಾರ್ಕಳ ಡಿವೈಎಸ್‌ಪಿ ಕಛೇರಿಯ ಜಗದೀಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News