ಉಚಿತವಾಗಿ 100 ಸೀಳು ತುಟಿ, ಅಂಗುಳಿನ ಶಸ್ತ್ರಚಿಕಿತ್ಸೆ ಪೂರೈಸಿದ ಆ್ಯಸ್ಟರ್ ಆಸ್ಪತ್ರೆ

Update: 2020-11-23 13:22 GMT

ಬೆಂಗಳೂರು, ನ.23: ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ 100ಕ್ಕೂ ಹೆಚ್ಚು ಸೀಳು ತುಟಿ, ಅಂಗುಳಿನ ಶಸ್ತ್ರಚಿಕಿತ್ಸೆಯನ್ನು ನಗರದ ಆ್ಯಸ್ಟರ್ ಸಿಎಂಐ ಆಸ್ಪತ್ರೆ ವೈದ್ಯರು ನಡೆಸಿದ್ದಾರೆ.

ಆ್ಯಸ್ಟರ್ ಸಿಎಂಐ ಆಸ್ಪತ್ರೆಯು ಲವ್ ವಿದೌಟ್ ರೀಸನ್ ಫೌಂಡೇಶನ್ ಸಹಯೋಗದೊಂದಿಗೆ ಕಳೆದ 5 ವರ್ಷಗಳಿಂದ ಆರ್ಥಿಕವಾಗಿ ಹಿಂದುಳಿದವರ ಮಕ್ಕಳಿಗೆ ಖರ್ಚುಮುಕ್ತ ಸೀಳುತುಟಿ ಶಸ್ತ್ರಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಸೀಳು ತುಟಿ, ಅಂಗುಳಿನಂತಹ ವಿರೂಪಗಳೊಂದಿಗೆ ಜನಿಸಿದ 100ಕ್ಕೂ ಹೆಚ್ಚು ಮಕ್ಕಳಿಗೆ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಈ ಕುರಿತು ಆ್ಯಸ್ಟರ್ ಸಿಎಂಐ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಸಲಹೆಗಾರ ಡಾ. ಸತೀಶ್ ಎಂ.ಎಸ್.ವಸಿಷ್ಠ ಮಾತನಾಡಿ, ಆ್ಯಸ್ಟರ್ ಸಿಎಂಐ ಆಸ್ಪತ್ರೆಯು ಸೀಳು ತುಟಿ, ಅಂಗುಳಿನ ಸಮಸ್ಯೆಯಾಗಿರುವ 100ಕ್ಕೂ ಹೆಚ್ಚು ಬಡ ಮಕ್ಕಳಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನೀಡಿರುವುದು ಸಂತಸದ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿ ಸೀಳು ತುಟಿ, ಅಂಗುಳಿನ ಸಮಸ್ಯೆಯಿರುವ ಬಡ ಮಕ್ಕಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News