ಕಾಪು : ಕಾರು ಢಿಕ್ಕಿ; ಪಾದಚಾರಿ ಮೃತ್ಯು
Update: 2020-11-24 05:21 GMT
ಕಾಪು : ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ.
ನರ್ಸರಿಯಲ್ಲಿ ಸಸಿ ಖರೀದಿಸಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ವೇಳೆ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುಧಾಕರ ಶೆಟ್ಟಿ ಅವರನ್ನು ಸ್ಥಳೀಯ ಯುವಕರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.