ಕೆರೆಗೆ ಹಾರಿ ಆತ್ಮಹತ್ಯೆ

Update: 2020-12-03 15:17 GMT

ಕೋಟ, ಡಿ.3: ಕಳೆದ ಎರಡು ವರ್ಷಗಳಿಂದ ಲಿವರ್ ಕ್ಯಾನ್ಸರ್‌ನಿಂದ ಬಳಲುತಿದ್ದ, ಚಿಕಿತ್ಸೆ ಮಾಡಿದರೂ ಗುಣವಾಗದೇ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಗಣೇಶ್ ಶೆಟ್ಟಿ (40) ಎಂಬವರು ಬುಧವಾರ ರಾತ್ರಿ 10:30ರ ಸುಮಾರಿಗೆ ಮನೆಯ ಬಳಿ ಇದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಇಂದು ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News