ಪ್ರತ್ಯೇಕ ಪ್ರಕರಣ : ಇಬ್ಬರ ಆತ್ಮಹತ್ಯೆ
ಬ್ರಹ್ಮಾವರ, ಡಿ. 4: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.3ರಂದು ರಾತ್ರಿ ವೇಳೆ ಉಪ್ಪೂರು ಗ್ರಾಮದ ನಗರ ನರ್ನಾಡು ಎಂಬಲ್ಲಿ ನಡೆದಿದೆ.
ಮೃತರನ್ನು ನರ್ನಾಡು ನಿವಾಸಿ ಶೇಖರ ಪೂಜಾರಿ(60) ಎಂದು ಗುರುತಿಸ ಲಾಗಿದೆ. ಇವರು ಮಲ್ಪೆಯಲ್ಲಿ ಬೋಟ್ ರಿಪೇರಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದರು. ಇದೇ ವಿಚಾರದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಜೆಸಿಬಿ ಕ್ಲೀನರ್ ಆಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಿಕೊಂಡಿದ್ದ ಕಿರಣ್ ನಾಯ್ಕ ಎಂಬವರು ವೈಯಕ್ತಿಕ ಕಾರಣದಿಂದ ಮನ ನೊಂದು ಡಿ.3ರಂದು ರಾತ್ರಿ ಬಸ್ರೂರಿನಲ್ಲಿರುವ ಶೆಡ್ಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.