ಗ್ರಾಪಂ ದಲಿತ ಅಭ್ಯರ್ಥಿಗಳಿಗೆ ಬೆದರಿಕೆ : ದಸಂಸ ಖಂಡನೆ
ಉಡುಪಿ, ಡಿ.5: ಜಿಲ್ಲೆಯ ಹಲವು ಕಡೆಗಳಲ್ಲಿ ಮೀಸಲು ಕ್ಷೇತ್ರದಲ್ಲಿ ದಲಿತ ಅಭ್ಯರ್ಥಿಗಳು ಸ್ಪರ್ಧಿಸದಂತೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿರುವ ಕ್ರಮ ವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ತೀವ್ರವಾಗಿ ಖಂಡಿಸಿದ್ದಾರೆ.
ಸಂಘಟನೆಯ ಪದಾಧಿಕಾರಿಗಳು ಕೂಡಲೇ ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ ಅಭ್ಯರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುವುದು. ಚುನಾ ವಣೆಗೆ ಸ್ಪರ್ಧಿಸದಂತೆ ಒತ್ತಡ ಹಾಗೂ ಬೆದರಿಕೆ ಹಾಕಿದವರ ವಿರುದ್ಧ ಪರಿಶಿಷ್ಟ ಜಾತಿ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗು ವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಇದೇ ರೀತಿ ಜಿಲ್ಲೆಯಾದ್ಯಂತ ಎಲ್ಲಿಯಾದರು ದಲಿತ ಅಭ್ಯರ್ಥಿಗಳಿಗೆ ಚುನಾವಣೆಗೆ ಸ್ಪರ್ಧಿಸದಂತೆ ಒತ್ತಡ, ಬೆದರಿಕೆ ಹಾಕುವ ಘಟನೆಗಳು ನಡೆದರೆ ಕೂಡಲೇ ಸಂಘಟನೆಯ ಗಮನಕ್ಕೆ ತರಬೇಕು ಎಂದು ಸುಂದರ್ ಮಾಸ್ತರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮ್‌ರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು, ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು, ಮಂಜುನಾಥ್ ಬಾಳ್ಕುದ್ರು, ಶ್ಯಾಮ್ ಸುಂದರ್ ತೆಕ್ಕಟ್ಟೆ, ಗೋಪಾಲಕೃಷ್ಣ ಕುಂದಾಪುರ, ಅಣ್ಣಪ್ಪ ನಕ್ರೆ, ಶ್ರೀಧರ ಕುಂಜಿಬೆಟ್ಟು, ತಾಲೂಕು ಪ್ರಧಾನ ಸಂಚಾಲಕರುಗಳಾದ ಶಂಕರ್‌ದಾಸ್ ಚೆಂಡ್ಕಳ, ಶ್ರೀನಿವಾಸ ವಡ್ಡರ್ಸೆ, ನಾಗರಾಜ ಕುಂದಾಪುರ, ದೇವು ಹೆಬ್ರಿ, ರಾಘವ ಕುಕ್ಕುಂಜೆ, ಕಾರ್ಕಳ ವಿಠಲ ಉಚ್ಚಿಲ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.