ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಸರ್.ಎಂ.ವಿಶ್ವೇಶ್ವರಯ್ಯ ಹೆಸರು

Update: 2020-12-05 17:51 GMT

ಬೆಂಗಳೂರು, ಡಿ.5: ನಗರದ ಬೈಯಪ್ಪನಹಳ್ಳಿ ಮೆಟ್ರೋ ರೈಲು ನಿಲ್ದಾಣಕ್ಕೆ ಸರ್. ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಎಂದು ನಾಮಕರಣ ಮಾಡಿ ಸುತ್ತೋಲೆ ಹೊರಡಿಸಿದೆ.

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಸರ್.ಎಂ.ವಿಶ್ವೇಶ್ವರಯ್ಯ ಹೆಸರು ನಾಮಕರಣ ಸಂಬಂಧ ಕೇಂದ್ರ ಸರಕಾರ ಯಾವುದೇ ಆಕ್ಷೇಪ ವ್ಯಕ್ತಪಡಿಸದೆ ಹಸಿರು ನಿಶಾನೆ ತೋರಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿ, ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಎಂದು ಹೆಸರು ನಾಮಕರಣ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News