ಗುರುಶಿಷ್ಯ ಪರಂಪರೆ ಯೋಜನೆ: ಮೂರು ತಿಂಗಳ ತರಬೇತಿ ಶಿಬಿರ

Update: 2020-12-06 13:55 GMT

ಮಂಗಳೂರು, ಡಿ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಸ್ತುತ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ಕಲಾಪ್ರಕಾರಗಳಲ್ಲಿ ಮೂರು ತಿಂಗಳ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ (ತರಬೇತಿದಾರರು) ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು. ಸ್ವವಿವರಗಳನ್ನು ಒಳಗೊಂಡ ಅರ್ಜಿಯನ್ನು ಚಾಲ್ತಿಯಲ್ಲಿರುವ ಜಾತಿ ಪ್ರಮಾಣಪತ್ರದೊಂದಿಗೆ ಡಿ.12ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ ಅಶೋಕನಗರ, ಉರ್ವಸ್ಟೋರ್, ಮಂಗಳೂರು, ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.: 0824- 2951327ನ್ನು ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News