ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
Update: 2020-12-06 15:17 GMT
ಉಡುಪಿ, ಡಿ.6: ಉಡುಪಿ ಸರಕಾರಿ ಐಟಿಐ ಸಂಸ್ಥೆಯಲ್ಲಿ ಐಟಿಐ ಕೋರ್ಸ್ ಗಳಲ್ಲಿ ಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕಾಗಿ ಎಸೆಸೆಲ್ಸಿ ಉತ್ತೀರ್ಣ ರಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸಂಸ್ಥೆಗೆ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದು ಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820- 2986145ನ್ನು ಸಂಪರ್ಕಿಸುವಂತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.