ಹೊಸ ಸಂಸತ್ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸುಪ್ರೀಂಕೋರ್ಟ್ ಅಸ್ತು

Update: 2020-12-07 06:35 GMT

 ಹೊಸದಿಲ್ಲಿ: ಹೊಸ ಸಂಸತ್ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಇಂದು ಅನುವು ಮಾಡಿಕೊಟ್ಟಿರುವ ಸುಪ್ರೀಂಕೋರ್ಟ್ ಸೆಂಟ್ರಲ್ ವಿಸ್ಟಾ ಪ್ರೊಜೆಕ್ಟ್‌ನ್ನು ವಿರೋಧಿಸಿ ಸಲ್ಲಿಸಿರುವ ಅರ್ಜಿಯ ವಿಲೇವಾರಿಯ ತನಕ ಕಟ್ಟಡದ ಧ್ವಂಸ ಅಥವಾ ನಿರ್ಮಾಣ ಕಾರ್ಯವನ್ನು ಮಾಡುವಂತಿಲ್ಲ ಎಂದು ಆದೇಶಿಸಿದೆ.

 ಕೇಂದ್ರ ಸರಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜಸ್ಟಿಸ್ ಎಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠವು ಕಟ್ಟಡ ನಿರ್ಮಾಣ ವಿಚಾರದಲ್ಲಿ ಆಕ್ರಮಣಕಾರಿಯಾಗಿ ಮುಂದುವರಿಯುತ್ತೀರಿ ಎಂದು ನಾವು ಯೋಚಿಸಿರಲಿಲ್ಲ ಎಂದು ಹೇಳಿತು.

ಕಟ್ಟಡ ನಿರ್ಮಾಣ, ದ್ವಂಸ ಇಲ್ಲವೇ ಮರಗಳನ್ನು ಕಡಿಯಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂಕೋರ್ಟ್‌ಗೆ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News