ದ.ಕ. ಜಿಲ್ಲೆ : ಕೋವಿಡ್‌ಗೆ ಇಬ್ಬರು ಬಲಿ, 27 ಮಂದಿಗೆ ಕೊರೋನ ಪಾಸಿಟಿವ್

Update: 2020-12-08 15:47 GMT

ಮಂಗಳೂರು, ಡಿ.8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಹೊಸದಾಗಿ 27 ಮಂದಿಗೆ ಕೊರೋನ ಸೋಂಕು ತಗುಲಿದ್ದು, 47 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 32,179ಕ್ಕೆ ಏರಿಕೆಯಾಗಿದೆ. ಈ ಪೈಕಿ 477 ಸಕ್ರಿಯ ಪ್ರಕರಣಗಳು. 30,980 ಮಂದಿ ಗುಣಮುಖರಾಗಿದ್ದಾರೆ. 722 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 15,980 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 17,02,872 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News