‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
ಮಂಗಳೂರು, ಡಿ. 8: ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2019ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.
ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಆಸಕ್ತ ಮುಸ್ಲಿಂ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2019ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಡಿ.31ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು- 575001 ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.: 0824- 2410358, 9845054191ನ್ನು ಸಂಪರ್ಕಿಸಬಹುದು.
ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿ ಸಲಾಗುವುದಿಲ್ಲ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.