ದ.ಕ.: ಕೋವಿಡ್ ಇಬ್ಬರು ಬಲಿ; 34 ಮಂದಿಗೆ ಕೊರೋನ ಸೋಂಕು

Update: 2020-12-09 15:44 GMT

ಮಂಗಳೂರು, ಡಿ. 9: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬುಧವಾರ ಹೊಸದಾಗಿ 34 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, 81 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 32,213 ಸೋಂಕಿತರ ಪೈಕಿ 31,061 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 724 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 428 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 39,22,271 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನಡೆದಿದ್ದು, 32,213 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.

ಜಿಲ್ಲೆಯಲ್ಲಿ ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಮಾತ್ರ ಹೆಚ್ಚುತ್ತಲೇ ಇದೆ. ಇದುವರೆಗೆ ಒಟ್ಟು 16,161 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 17,21,172 ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News