ಗ್ರಾಪಂ ಸ್ಥಾನವನ್ನು ಹರಾಜು ಮಾಡಿದಲ್ಲಿ ಕ್ರಿಮಿನಲ್ ಪ್ರಕರಣ : ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

Update: 2020-12-10 14:58 GMT

ಉಡುಪಿ, ಡಿ.10: ಈ ಬಾರಿಯ ಗ್ರಾಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತ್ ಸ್ಥಾನ ಗಳನ್ನು ಬಹಿರಂಗ ಹರಾಜಿನ ಮೂಲಕ ಮತದಾರರಿಗೆ ಹಣದ ಆಮಿಷವೊಡ್ಡಿ ಖರೀದಿ ಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಡಿ.9ರ ವೀಡಿಯೋ ಸಂವಾದದಲ್ಲಿ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕಾನೂನಾತ್ಮಕ ಕ್ರಮ ಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಪಂ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹರಾಜು ಹಾಗೂ ಹಣದ ಆಮಿಷಕ್ಕಾಗಿ ಸ್ಥಾನಗಳನ್ನು ಖರೀದಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ, ಅಂತಹ ಅಭ್ಯರ್ಥಿ ಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News