ಮಾನವ ಹಕ್ಕುಗಳ ಆಚರಣೆಯಿಂದ ಜನ ಸಾಮಾನ್ಯರಲ್ಲಿ ಅರಿವು : ಡಾ. ಸುಧೀರ್ ‌ಚಂದ್ರ ಸೂಡ

Update: 2020-12-10 15:10 GMT

ಉಡುಪಿ, ಡಿ.10: ಮಾನವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಇಂದು ವಿಶ್ವದಾದ್ಯಂತ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಮಾನವ ಹಕ್ಕುಗಳ ದಿನವನ್ನು ಆಚರಿಸುವ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ಗುರುವಾರ, ಬಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿ ಮಾನವನಿಗೆ ಸುಗಮ ಜೀವನ ನಡೆಸಲು ಮಾನವ ಹಕ್ಕುಗಳು ಅತ್ಯಗತ್ಯ.ಮಾನವ ಹಕ್ಕುಗಳನ್ನು ಗೌರವಿಸಿ, ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು. ಪ್ರತಿಯೊಬ್ಬ ನಾಗರಿಕ ಘನತೆ, ಗೌರವದಿಂದ ಕೂಡಿದ ಬದುಕುವ ಹಕ್ಕು ಹೊಂದಿರ ಬೇಕೆಂಬುವುದು ಮಾನವ ಹಕ್ಕುಗಳ ಆಶಯ. ಹೀಗಾಗಿ ಸಾಮಾಜಿಕ, ಆರ್ಥಿಕ, ಆರೋಗ್ಯ, ಸಮಾನತೆ ಸೇರಿದಂತೆ ಎಲ್ಲ ಬಗೆಯ ಮಾನವ ಹಕ್ಕುಗಳನ್ನು ಉಳಿಸಿ, ರಕ್ಷಿಸುವ ಕೆಲಸವಾಗಬೇಕು ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ಬದ್ಧವಾಗಿ ನೀಡಿರುವ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಿದರೆ, ಮಾತ್ರ ಸಮಾಜದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಸಾಧ್ಯ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಬಗ್ಗೆ ಮಾಹಿತಿ ಪಡೆದು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಕೀಲ ಮುಂಡ್ಕೂರು ವಿನಯ ಆಚಾರ್ಯ ಮಾತನಾಡಿ, ಮಾನವ ಸಹಜವಾಗಿ ಹುಟ್ಟಿನಿಂದ ಪಡೆದಿರುವ ನೈಸರ್ಗಿಕವಾದ ಹಕ್ಕುಗಳೇ ಮಾನವ ಹಕ್ಕುಗಳು. ಮನುಷ್ಯರಿಗೆ ಸ್ವತಂತ್ರವಾಗಿ ಜೀವಿಸುವ ಹಕ್ಕು ಸಮಾಜದಲ್ಲಿ ದೊರೆತಿದ್ದು, ಜನಸಾಮಾನ್ಯರ ಮೇಲೆ ಅಗುವ ಶೋಷಣೆಯನ್ನು ತಡೆದು, ಮಾನವೀಯ ವೌಲ್ಯದಲ್ಲಿ ಸ್ವತಂತ್ರವಾಗಿ ಬದುಕುವ ಹಕ್ಕು ಸಮಾಜದಲ್ಲಿ ಮಾನವ ನಿಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ರೆಡ್‌ಕ್ರಾಸ್‌ನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತ ರಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಸ್ವಾಗತಿಸಿ ಗೌರವ ಕಾರ್ಯದರ್ಶಿ ಕೆ.ಜಯರಾಮ ಆಚಾರ್ಯ ಸಾಲಿ ಗ್ರಾಮ ಕಾರ್ಯಕ್ರಮ ನಿರೂಪಿಸಿದರು. ಗೌರವ ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News