ಡಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2020-12-11 17:00 GMT

ಉಡುಪಿ, ಡಿ.11: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಡಿ.ಎಡ್.ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿ ರುವ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅಪ್‌ಲೈನ್ ಅರ್ಜಿಯನ್ನು ಸಂಬಂಧಪಟ್ಟ ಕಾಲೇಜುಗಳಿಂದ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ, ಕುಂದಾಪುರ, ಕಾರ್ಕಳ ಇವರಿಂದ ಪಡೆದು, ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಡಿ.30 ರೊಳಗೆ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News