ಯುವ ಸೌರಭ ಯುವ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ

Update: 2020-12-12 12:03 GMT

ಉಡುಪಿ, ಡಿ.11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಯುವ ಸೌರಭ- ಯುವ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ ಡಿ.15ರಂದು ಸಂಜೆ 4:30ಕ್ಕೆ ಉಡುಪಿ ಎಂ.ಜಿ.ಎಂ ಕಾಲೇಜು ಆವರಣದ ರಾಷ್ಟ್ರಕವಿ ಎಂ.ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಸಾಹಿತಿ ಡಾ. ಮಾಧವಿ ಂಡಾರಿ ಉದ್ಘಾಟಿಸಲಿದ್ದು, ಉಡುಪಿ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ.ವರದೇಶ್ ಹಿರೇಗಂಗೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News