ಕನ್ನಡ ಸಂಸ್ಕೃತಿ ಇಲಾಖೆಯಿಂದ ವಿವಿಧ ಯೋಜನೆಗೆ ಸಹಾಯಧನ

Update: 2020-12-15 15:37 GMT

ಉಡುಪಿ, ಡಿ.15:ಕನ್ನಡಭಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

2019-20ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯಗಳಿಂದ, ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಎಂ.ಫಿಲ್ ಪದವಿ ಪಡೆದ ಪ್ರೌಢ ಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ, 2019-20ನೇ ಸಾಲಿನಲ್ಲಿ ವಿವಿಗಳಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಪಿಹೆಚ್‌ಡಿ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ ಹಾಗೂ 2019ರ ಜನವರಿಯಿಂದ ಡಿಸೆಂಬರ್ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಸೃಜನೇತರ ಕನ್ನಡ ಗ್ರಂಥಗಳಿಗೆ ಸಹಾಯಧನ ನೀಡಲಾಗುವುದು.

ಪಿಎಚ್‌ಡಿ ಮತ್ತು ಎಂಫಿಲ್ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನೇರವಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್-www.kannadasiri.in- ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News