ಬಿಜೆಪಿಯಿಂದ ಸಂತೋಷ್ ಬೈರಂಪಳ್ಳಿ ಉಚ್ಚಾಟನೆ
Update: 2020-12-16 15:43 GMT
ಉಡುಪಿ, ಡಿ.16: ಕಳೆದ ಹಲವಾರು ಸಮಯದಿಂದ ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಸಂತೋಷ್ ಕುಮಾರ್ ಬೈರಂಪಳ್ಳಿ ಅವರನ್ನು ಪಕ್ಷದ ಸಾಮಾನ್ಯ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸ ಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.