ಕಾಸರಗೋಡು : ಕಾಂಗ್ರೆಸ್ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Update: 2020-12-19 07:58 GMT

ಕಾಸರಗೋಡು : ಕಾಂಗ್ರೆಸ್ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಪಡನ್ನಡದಲ್ಲಿ ಶನಿವಾರ ನಡೆದಿದೆ.

ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಫೈಝಲ್ ಅವರ  ಮನೆ ಮೇಲೆ ದಾಳಿ ನಡೆಸಲಾಗಿದ್ದು,  ಮನೆಗೆ ಹಾನಿಯಾಗಿದೆ. ಕಿಟಿಕಿಯ ಗಾಜುಗಳು ಹೊಡೆದಿದ್ದು , ಗೋಡೆಗೆ ಹಾನಿಯಾಗಿದೆ. ಈ ಸಂದರ್ಭ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಬೈಕ್ ನಲ್ಲಿ ಬಂದ ತಂಡ ಈ ಕೃತ್ಯ ನಡೆಸಿರುವುದಾಗಿ ಚಂದೇರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News