​ನೂತನ ಬ್ಯಾರಿ ಭವನದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶವಿಲ್ಲ: ರಹೀಂ ಉಚ್ಚಿಲ್

Update: 2020-12-19 13:43 GMT

ಮಂಗಳೂರು, ಡಿ.19: ನೂನತ ಬ್ಯಾರಿ ಭವನದದಲ್ಲಿ ಒಂದು ಸಮುದಾಯಕ್ಕೆ ಸೇರಿದ ಧಾರ್ಮಿಕ ಕೇಂದ್ರ ನಿರ್ಮಾಣವಾಗಲಿದೆ ಎಂಬ ತಪ್ಪುಕಲ್ಪನೆಯನ್ನು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಈ ಭವನದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿರುವುದಿಲ್ಲ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಬ್ಯಾರಿ ಭವನವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫೃ್ ಇಲಾಖೆ ಸೇರಿದಂತೆ ಯಾವುದೇ ಒಂದು ಸಮುದಾಯವನ್ನು ಪ್ರತಿನಿಧಿಸುವ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿಲ್ಲ, ಬದಲಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನಕ್ಕೆ ಒಳಪಟ್ಟ ಭವನವಾಗಿದ್ದು ಇಲ್ಲಿ ಭಾಷೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಮುಂತಾದ ವಿಷಯಗಳಿಗೆ ಮಾತ್ರ ಉಪಯೋಗವಾಗಲಿದೆ. ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಈ ಭವನವನ್ನು ಬಳಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜ.1ಕ್ಕೆ ಶಿಲಾನ್ಯಾಸ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ನೂತನ ಬ್ಯಾರಿ ಭವನ ಕಟ್ಟಡದ ಶಿಲಾನ್ಯಾಸವು ಜ.1ರಂದು ಬೆಳಗ್ಗೆ 10ಕ್ಕೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ನಡೆಯಲಿದೆ. ಗೋಳಿದಡಿಗುತ್ತು ಗುರುಪುರದ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ, ಸೈಯದ್ ಹಸನ್ ಆಟಕೋಯ ತಂಙಳ್ ಅಸ್ಸಖಾಫ್ (ಆದೂರು ತಂಙಳ್) ಹಾಗೂ ತೊಕ್ಕೊಟ್ಟು ಸೈಂಟ್ ಸೆಬೆಸ್ಟಿಯನ್ ಚರ್ಚಿನ ಧರ್ಮಗುರು ರೆ. ಫಾ. ಸಿಪ್ರಿಯನ್ ಪಿಂಟೊ ಆಶೀರ್ವಚನ ನೀಡಲಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಶಿಲಾನ್ಯಾಸ ಫಲಕ ಅನಾವರಣ ಮಾಡಲಿದ್ದಾರೆ. ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವೈ., ರಾಜೇಶ್ ನಾಯ್ಕ್ ಯು, ಉಮಾನಾಥ ಎ. ಕೋಟ್ಯಾನ್, ಬೆಂಗಳೂರು ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರಿ ಲಿ. ಇದರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಉಳ್ಳಾಲ ನಗರಸಭೆಯ ಅಧ್ಯಕ್ಷೆ ಚಂದ್ರಕಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ತುಳು ಅಕಾಡಮಿುಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್, ಕೊಂಕಣಿ ಅಕಾಡಮಿಯ ಅಧ್ಯಕ್ಷ ಡಾ. ಕೆ. ಜಗದೀಶ್ ಪೈ, ಅರೆಭಾಷೆ ಸಾಹಿತ್ಯ-ಸಂಸ್ಕೃತಿ ಅಕಾಡಮಿಯ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ, ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ನಗರದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷರಾದ ಎಂ. ಬಿ. ಅಬ್ದುಲ್ ರಹ್ಮಾನ್, ಕರಂಬಾರ್ ಮುಹಮದ್, ಬಿ.ಎ.ಮುಹಮ್ಮದ್ ಹನೀಫ್, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಸಿ., ದ.ಕ. ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜೆ., ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ. ಅಸ್ಲಂ, ಭಾರತೀಯ ಕೃಷಿಕ ಸಮಾಜ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಬ್ಯಾರಿ ಕಲಾರಂಗದ ಅಧ್ಯಕ್ಷ ಅಝೀಝ್ ಬೈಕಂಪಾಡಿ, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಮದನಿ ಪಿ.ಯು. ಕಾಲೇಜಿನ ಪ್ರಾಂಶುಪಾಲ ಹಾಗೂ ಮೇಲ್ತೆನೆಯ ಅಧ್ಯಕ್ಷ ಇಸ್ಮಾಯಿಲ್ ಟಿ, ಬ್ಯಾರಿ ಅಧ್ಯಯನ ಪೀಠದ ಮುಖ್ಯಸ್ಥ ಡಾ. ಅಬೂಬಕ್ಕರ್ ಸಿದ್ದೀಕ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News